ಹೊಸ ಶಿಕ್ಷಣ ನೀತಿ ಜಾರಿ 2020
ಹೊಸ ಶಿಕ್ಷಣ ನೀತಿ ಜಾರಿ ಇನ್ನು ಮುಂದೆ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ) ಭಾರತದಲ್ಲಿ ಜಾರಿಯಾಗಲಿದೆ. ಈಗ ಇರುವ 10+2 ಶಿಕ್ಷಣ ವ್ಯವಸ್ಥೆ 5+3+3+4 ಮಾದರಿಯಾಗಿ ಬದಲಾವಣೆಯಾಗಲಿದೆ. ರಾಷ್ಟ್ರೀಯ ಶಿಕ್ಷಣ ನೀತಿಯ ಕರಡನ್ನು ಕೇಂದ್ರ ಸರ್ಕಾರ ಈ ಹಿಂದೆ ಪ್ರಕಟಿಸಿತ್ತು. ಸಾರ್ವಜನಿಕರಿಂದ ಸಲಹೆಗಳನ್ನು ಪಡೆದು ಈಗ ಈ ಹೊಸ ಎನ್‌ಇಪಿಗೆ ಕೇಂದ್ರ ಕ್ಯಾಬಿನೆಟ್ ಒಪ್ಪಿಗೆ ನೀಡಿದೆ. ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ಸುದ್ದಿಗೋಷ್ಠಿ ನಡೆಸಿ ಹೊಸ ನೀತಿಯ ವಿವರಗಳನ್ನು ನೀಡಿದರು. 2015ರಿಂದ ಎನ್‌ಇಪಿ ಜಾರಿ ಸಂಬಂಧ ಚರ್ಚೆ ನಡೆಯುತ್ತಿತ್ತು. ಈಗ ಹೊಸ ನೀತಿ ಜಾರಿಯಾಗಿದೆ. 34 ವರ್ಷದ ಹಿಂದೆ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆ ಆಗಿತ್ತು. ಆದಾದ ಬಳಿಕ ಈಗ ಬದಲಾವಣೆ ಆಗುತ್ತಿದೆ. ಎನ್‌ಇಪಿಯಲ್ಲಿ ಏನಿದೆ? ಇನ್ನು ಮುಂದೆ 10+2 ಶಿಕ್ಷಣ ವ್ಯವಸ್ಥೆ ಇರುವುದಿಲ್ಲ. ಇದನ್ನು 5+3+3+4 ರಂತೆ ವಿಂಗಡನೆ ಮಾಡಲಾಗಿದೆ. ಇದರರ್ಥ ಶಾಲೆಯ ಮೊದಲ ಐದು ವರ್ಷಗಳು ಅಡಿಪಾಯ ಹಂತ, 3 ರಿಂದ 5 ನೇ ತರಗತಿಯವರೆಗಿನ ಮೂರು ವರ್ಷಗಳನ್ನು ಪೂರ್ವಸಿದ್ಧತಾ ಹಂತವಾಗಿ ವಿಂಗಡಿಸಲಾಗಿದೆ. ನಂತರ ಮೂರು ವರ್ಷಗಳು ಮಧ್ಯಮ ಹಂತವಾಗಿ ವಿಂಗಡಿಸಲಾಗಿದೆ. ನಂತರದ ನಾಲ್ಕು ವರ್ಷವನ್ನು ದ್ವಿತೀಯ ಹಂತವನ್ನಾಗಿ ವಿಂಗಡಿಸಲಾಗಿದೆ. ಶಾಲೆಗಳು ಶಾಲೆಗಳು ಕಲೆ, ವಾಣಿಜ್ಯ, ವಿಜ್ಞಾನದ ಹೊಳೆಗಳ ಯಾವುದೇ ಕಟ್ಟುನಿಟ್ಟಿನ ರಚನೆಯನ್ನು ಹೊಂದಿರುವುದಿಲ್ಲ, ವಿದ್ಯಾರ್ಥಿಗಳು ತಾವು ಬಯಸ