ಒಬ್ಬ ಶ್ರೀಮಂತ ತನ್ನ ಮುದ್ದು ಮಗನಿಗೆ ಬರೆದ ಕೊನೇ ಪತ್ರ

ಒಬ್ಬ ಶ್ರೀಮಂತ ತನ್ನ ಮುದ್ದು ಮಗನಿಗೆ ಬರೆದ ಕೊನೇ ಪತ್ರ

 



*ಒಬ್ಬ ಶ್ರೀಮಂತ ತನ್ನ ಮುದ್ದು ಮಗನಿಗೆ ಸಾಯುವ ಸಮಯದಲ್ಲಿ ವಿಲ್ ಪತ್ರದ ಜೊತೆ ಹಳೆಯ ಪಾದರಕ್ಷೆಗಳನ್ನು ನೀಡಿ ಹೇಳಿದ, ವಿಲ್ ಪತ್ರದಲ್ಲಿ ನಿನಗೆ ನನ್ನೆಲ್ಲಾ ಆಸ್ತಿಯನ್ನು ಬರೆದಿದ್ದೇನೆ. ನೀನು ಸುಖವಾಗಿ ಬಾಳು ಆದರೆ ನನ್ನ ಕೊನೆಯ ಆಸೆಯೊಂದಿದೆ ಅದನ್ನು ನೆರವೇರಿಸು ಅಷ್ಟು ಸಾಕು. ಅದೇನೆಂದರೆ ನಾನು ಸತ್ತ ಮೇಲೆ ನನ್ನ ಪಾದಕ್ಕೆ ಈ ಹಳೆಯ ಚಪ್ಪಲಿಯನ್ನು ತೊಡಿಸಿ ಅಂತ್ಯ ಕ್ರಿಯೆ ನೆರವೆರಿಸು! ಎಂದು ಹೇಳುತ್ತಾನೆ.*

*ಮಗ ತನ್ನ ಕೆನ್ನೆಯ ಮೇಲೆ ಜಾರುತ್ತಿದ್ದ ಕಣ್ಣಿರನ್ನು ಒರೆಸಿಕೊಳ್ಳುತ್ತಾ ಈ ಸಣ್ಣ ಆಸೆಯನ್ನು ನಾನು ಖಂಡಿತ ನೆರವೆರಿಸುತ್ತೇನೆ ಎಂದು ಅಪ್ಪನಿಗೆ ಮಾತು ಕೊಡುತ್ತಾನೆ. ತಂದೆಯು ಕೊನೆಯುಸಿರೆಳೆದ ದಿನ ವಿಧಿ ವಿಧಾನ ಕಾರ್ಯಗಳನ್ನು ಮಾಡಿದ ಪಂಡಿತರಿಗೆ ಮಗ ಅಪ್ಪನಿಗೆ ಹಳೆಯ ಚಪ್ಪಲಿ ತೊಡಿಸಲು ಕೋರುತ್ತಾನೆ ಆದರೆ ಪಂಡಿತರು ಸಾಧ್ಯವೇ ಇಲ್ಲ ಇದು ಅಂತ್ಯಕ್ರಿಯೇ ಸಂಪ್ರದಾಯದಲ್ಲೇ ಇಲ್ಲವೆಂದು ನಿರಾಕರಿಸುತ್ತಾರೆ. ಎಷ್ಟೇ ಪ್ರಯತ್ನ ಪಟ್ಟರು ಆ ಶ್ರೀಮಂತ ವ್ಯಕ್ತಿಗೆ ಹಳೆಯ ಚಪ್ಪಲಿ ತೊಡಿಸಲು ಸಾಧ್ಯವೇ ಆಗುವುದಿಲ್ಲ! ಈ ವಿಚಾರವಾಗೇ ಊರಿನ ಮಂದಿಯಲ್ಲರೂ ಸೇರಿ ಈ ವಿಷಯದ ಕುರಿತು ಚರ್ಚಿಸುತ್ತಿರುತ್ತಾರೆ. ಅಷ್ಟರಲ್ಲಿ ಅಲ್ಲಿಗೆ ಓಡೊಡಿ ಬಂದ ಆ ಶ್ರೀಮಂತನ ಸ್ನೇಹಿತ ಮಗನಿಗೆ ಪತ್ರ ನೀಡಿ ಹೇಳುತ್ತಾನೆ. ನಿಮ್ಮ ತಂದೆಯವರು ಕೆಲ ದಿನಗಳ ಹಿಂದೆ ನನ್ನನ್ನು ಕರೆದು ಈ ಪತ್ರವನ್ನು ನನ್ನ ಮಗನಿಗೆ ನನ್ನ ಅಂತ್ಯ ಸಂಸ್ಕಾರದ ಕೊನೆಗಳಿಗೆಯಲ್ಲಿ ನೀಡಲು ತಿಳಿಸಿದ್ದರು ಎಂದು ಹೇಳುತ್ತಾನೆ.*

*ತುಂಬಾ ಕೂತುಹಲದಿಂದ ಆ ಪತ್ರವನ್ನು ತೆರೆದು ನೋಡಿದಾಗ ಅವರ ತಂದೆ ಬರೆದಿರುತ್ತಾರೆ ಪ್ರಿಯ ಪುತ್ರನೇ ನೋಡಿದೆಯಾ? ದೊಡ್ಡ ಪ್ಯಾಕ್ಟರಿ, ಭವ್ಯ ಬಂಗಲೆ, ಕಾರು, ಚಿನ್ನ, ಒಡವೆ, ಫಾರಂ ಹೌಸ್ ಇದೆಲ್ಲರ ಒಡೆಯನಾಗಿದ್ದರೂ ನಾನು ಒಂದು ಜೊತೆ ಹಳೆಯ ಚಪ್ಪಲಿಯನ್ನು ಕೊಡ ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತಿಲ್ಲ, ಇಷ್ಟೇ ಬದುಕಿನ ಸತ್ಯ! ನಿನಗೂ ಒಂದು ದಿನ ಸಾವು ಹತ್ತಿರವಾಗುತ್ತದೆ, ನೀನು ಕೇವಲ ಬಿಳಿ ಬಟ್ಟೆಯಲ್ಲಿ ಇಹಲೋಕ ತ್ಯಜಿಸಬೇಕು, ಈಗಲೇ ಎಚ್ಚರಗೊಳ್ಳು ದುಡ್ಡಿಗಾಗಿ ಯಾರನ್ನು ನೋಯಿಸಬೇಡಾ, ಪಿಡಿಸಬೇಡ ಅನ್ಯಾಯ ಮತ್ತು ಅಧರ್ಮದಿಂದ ಹಣ ಸಂಪಾದನೆ ಮಾಡ ಬೇಡ, ನೀನು ಗಳಿಸಿದ ಹಣದಲ್ಲಿ ಕೆಲ ಭಾಗವನ್ನ ನಿರ್ಗತಿಕರಿಗೆ, ಇಲ್ಲದವರಿಗೆ ದಾನ ಮಾಡು, ಸತ್ಕಾರ್ಯಗಳಿಗೆ ಹಣವನ್ನು ಬಳಸು ಸತ್ತಾಗ ನಿನ್ನ ಹಿಂದೆ ಬರುವುದು ನಿನ್ನ ಕರ್ಮಗಳು ಮಾತ್ರ! ಎಂದು ಪತ್ರ ಮುಗಿಸುತ್ತಾನೆ.*


ಒಳಿತು ಮಾಡು ಮನುಷ್ಯ ನೀ ಇರೋದು ಮೂರು ದಿವಸ, ಉಸಿರು ನಿಂತ ಮ್ಯಾಲೆ ನಿನ್ನ ಹೆಸರು ಹೇಳುತ್ತಾರ, ಹೆಣ ಅನ್ನುತ್ತಾರ ಮಣ್ಣಾಗಿ ಹೂಳುತ್ತಾರ,,.🙏🏼

Comments

Popular posts from this blog

ಹಿಂದೂಧರ್ಮದ ಕರೆ - ಸ್ವಾಮಿ ವಿವೇಕಾನಂದ

Rainbow loader with html with CSS